- Advertisement -
![]()
- Advertisement -
ಮಂಗಳೂರು; ಮಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಗಳು ದಿನಾಂಕ 25.10.2024 ರಂದು ಮಂಗಳೂರಿನಲ್ಲಿರುವ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿನ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ರು.
ಈ ವೇಳೆ ಕಚೇರಿ ನಿರ್ವಹಣೆಯಲ್ಲಿ ಮತ್ತು ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದ್ದು, ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನೀಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರಾದ ಎಂ.ಎ ನಟರಾಜ ಮಂಗಳೂರು ತಿಳಿಸಿದ್ದಾರೆ,
- Advertisement -


