Wednesday, July 15, 2026
Homeಕರಾವಳಿಉಡುಪಿಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಿದ ಆಯಿಲ್; ಸಂಕಷ್ಟಕ್ಕೀಡಾದ ವಾಹನ ಸವಾರರು

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಿದ ಆಯಿಲ್; ಸಂಕಷ್ಟಕ್ಕೀಡಾದ ವಾಹನ ಸವಾರರು

- Advertisement -
- Advertisement -

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ನಿಂದ ಆಯಿಲ್ ಲೀಕ್ ಆಗಿರುವ ಕಾರಣ ಸರಣಿ ಅಪಘಾತಗಳು ಸಂಭವಿಸಿವೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತೆಕ್ಕಟ್ಟೆಯಿಂದ ಮರವಂತೆವರೆಗೆ ರಸ್ತೆಯಲ್ಲಿ ಆಯಿಲ್ ಚೆಲ್ಲಿ ಹೋಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕ ಮುಖ ಸಂಚಾರ ಬಂದ್ ಮಾಡಲ್ಪಟ್ಟಿದೆ.

ಟ್ಯಾಂಕರ್ ನಿಂದ ಆಯಿಲ್ ಬಿದ್ದಿದೆ ಎಂದು ಹೇಳಲಾಗಿದ್ದು, ಜಾರುತ್ತಿರುವ ರಸ್ತೆಯಲ್ಲಿ ಬೈಕ್ ಸವಾರರು ಸಂಕಷ್ಟಕ್ಕೀಡಾಗಿದ್ದಾರೆ.

ಇಂದು ಬೆಳಗ್ಗೆ ಟ್ಯಾಂಕರ್ ನಿಂದ ಆಯಿಲ್ ಚೆಲ್ಲಿರುವ ಶಂಕೆ ವ್ಯಕ್ತವಾಗಿದ್ದು, ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ದಟ್ಟಣೆಯೂ ಹೆಚ್ಚಾಗಿತ್ತು.

ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಹಿನ್ನೆಲೆಯಲ್ಲಿ ಕೋಟೇಶ್ವರದ ಬಳಿ ಅಗ್ನಿಶಾಮಕ ದಳದವರು ಹೆದ್ದಾರಿಯನ್ನು ಸ್ವಚ್ಛಗೊಳಿಸಿದ್ದಾರೆ.

- Advertisement -

Latest News

error: Content is protected !!