Wednesday, June 3, 2026
Homeಕರಾವಳಿಉಡುಪಿಕಾರ್ಕಳ: ಬೆಂಕಿ ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ವೃದ್ಧೆ ನಿಧನ

ಕಾರ್ಕಳ: ಬೆಂಕಿ ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ವೃದ್ಧೆ ನಿಧನ

- Advertisement -
- Advertisement -

ಕಾರ್ಕಳ:  ಓಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ‌ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ನಡೆದಿದೆ. ಸಾಣೂರು ಗ್ರಾಮದ ನಿವಾಸಿ 71 ವರ್ಷದ ಸುಮತಿ ಶೆಟ್ಟಿ ಮೃತ ದುರ್ದೈವಿ.

ಇವರು ಏ.4ರಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಕಟ್ಟಿಗೆ ಓಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಸೀರೆಯ ಸೆರಗಿಗೆ ಬೆಂಕಿ ತಗಲಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡವರನ್ನು ಆಳ್ವಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿ ಮನೆಗೆ ಬಂದಿದ್ದರು. ಕೆಲವು ದಿನಗಳ ಬಳಿಕ ಗಾಯ ಮತ್ತೆ ಉಲ್ಬಣಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆ ಹಾಗೂ ಉಡುಪಿ ಅಜ್ಜರಕಾಡಿನ ಆಸ್ಪತ್ರೆ ದಾಖಲಿಸಲಾಗಿತ್ತು. ಆ ನಂತರ ಏ.30ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮತಿ‌ ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!