Friday, June 5, 2026
Homeಕರಾವಳಿಉಡುಪಿಮೂಡಬಿದರೆ: ಬಾವಿಗೆ ಹಾರಿ‌ ವೃದ್ಧ ಆತ್ಮಹತ್ಯೆ

ಮೂಡಬಿದರೆ: ಬಾವಿಗೆ ಹಾರಿ‌ ವೃದ್ಧ ಆತ್ಮಹತ್ಯೆ

- Advertisement -
- Advertisement -

ಮೂಡಬಿದಿರೆ: ಬಾವಿಗೆ ಹಾರಿ‌ ವೃದ್ಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ  ಮಹಾವೀರ ಕಾಲೇಜು ಬಳಿಯ ಕೀರ್ತಿನಗರದಲ್ಲಿ ನಡೆದಿದೆ.  ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೃವಿ.
ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ.

ಮನೆಯವರು ರಾತ್ರಿ ಮಲಗಿದ್ದ ಸಂದರ್ಭ ಬಾವಿಗೆ ಹಾರಿದ್ದು ಬೆಳಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ.

ಮೂಡಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!