- Advertisement -
![]()
- Advertisement -
ಬ್ರಹ್ಮಾವರ: ಕಾಲು ಜಾರಿ ಬಾವಿಗೆ ಬಿದ್ದು ವೃದ್ಧ ಸಾವನ್ನಪ್ಪಿರೋ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆಯ ಸಾಲಿಕೇರಿಯಲ್ಲಿ ನಡೆದಿದೆ. ಶಂಕರಪ್ರಭು(82) ಬಾವಿಗೆ ಬಿದ್ದು ಮೃತಪಟ್ಟವರು.
ಇವರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ.. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಇಳಿದು ಹಗ್ಗದ ಸಹಾಯದಿಂದ ಶಂಕರ ಪ್ರಭು ಅವರ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -


