Tuesday, July 1, 2025
Homeಕರಾವಳಿಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಮಿಕ್ರಾನ್‌ ಪ್ರಕರಣ ಪತ್ತೆಯಾದ ಹಿನ್ನೆಲೆ ಇನ್ನಷ್ಟು ಎಚ್ಚರಿಕೆ ಕ್ರಮ ವಹಿಸಲಾಗಿದೆ:...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಮಿಕ್ರಾನ್‌ ಪ್ರಕರಣ ಪತ್ತೆಯಾದ ಹಿನ್ನೆಲೆ ಇನ್ನಷ್ಟು ಎಚ್ಚರಿಕೆ ಕ್ರಮ ವಹಿಸಲಾಗಿದೆ: ಡಾ| ರಾಜೇಂದ್ರ ಕೆ.ವಿ.

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 5 ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗರಿಷ್ಠ ಎಚ್ಚರಿಕೆಗೆ ಕ್ರಮ ವಹಿಸಲಾಗಿದ್ದು, ಟ್ರಾವೆಲ್‌ ಹಿಸ್ಟರಿ ಇಲ್ಲದೆ ಹೊಸ ವೈರಸ್‌ ಸೋಂಕು ಹೇಗೆ ಬಂತು ಎನ್ನುವ ಬಗ್ಗೆ ತಪಾಸಣೆ ನಡೆಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ತಿಳಿಸಿದ್ದಾರೆ. ಈ ಬಗ್ಗೆ ರವಿವಾರ ಬೆಳಗಾವಿಗೆ ತೆರಳುವ ವೇಳೆ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಮಂಗಳೂರಿನ ಒಂದು ನರ್ಸಿಂಗ್‌ ಕಾಲೇಜಿನ ಸೋಂಕಿತರಲ್ಲಿ ಒಬ್ಬರಲ್ಲಿ ಒಮಿಕ್ರಾನ್‌ ಪತ್ತೆಯಾಗಿದೆ. ಎಲ್ಲ ಸೋಂಕಿತರನ್ನು ಕ್ವಾರಂಟೈನ್‌ ಮಾಡಲಾಗಿದೆ. ಶಾಲೆ, ಕಾಲೇಜು ಕ್ಯಾಂಪಸ್‌ಗಳಲ್ಲಿ ಇರುವ ಎಲ್ಲರ ಸ್ವಾಬ್‌ ಟೆಸ್ಟ್‌ ಮಾಡಲಾಗಿದೆ. ಅಲ್ಲದೆ, ಎಲ್ಲರ ಹಿಸ್ಟರಿ ಸಂಗ್ರಹಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದವರು ವಿವರಿಸಿದರು.

ಪತ್ತೆಯಾಗಿರುವ ಒಮಿಕ್ರಾನ್‌ ಸೋಂಕಿತರು ಹೊರ ರಾಜ್ಯ, ಹೊರ ದೇಶಗಳಿಗೆ ಹೋಗಿಲ್ಲ. ಮಂಗಳೂರಿನಲ್ಲಿ ಕಲಿಯುತ್ತಿರುವ ಹೊರ ರಾಜ್ಯದ ವಿದ್ಯಾರ್ಥಿನಿ. ಹಾಗಿದ್ದರೂ ಒಮಿಕ್ರಾನ್‌ ಪ್ರಕರಣ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

- Advertisement -
spot_img

Latest News

error: Content is protected !!