Friday, June 5, 2026
Homeಕರಾವಳಿಮಂಗಳೂರುಏ.14 ರಂದು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

ಏ.14 ರಂದು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

- Advertisement -
- Advertisement -

ಮಂಗಳೂರು : ಏ.14 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರವಾಗಿ ಮೋದಿ ಮತಯಾಚನೆ ಮಾಡಲಿದ್ದಾರೆ.

ಏ.14ರಂದು ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ,  ಮಂಗಳೂರಿನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.  ಮೋದಿ ಆಗಮನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.

4ಲೋಕಸಭೆಯ ಚುನಾವಣೆಯ ಕಾವು ಏರುವ ಮೊದಲೇ ಮೋದಿ ಅವರು ಮಾ.16ರಂದು ಕಲಬುರಗಿಗೆ ಆಗಮಿಸಿ ಪಕ್ಷದ ಪರ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅದೇ ದಿನ ಚುನಾವಣಾ ವೇಳಾಪಟ್ಟಿ ಘೋಷಣೆಯಾಯಿತು. ನಂತರ ಮಾ.18ರಂದು ಶಿವಮೊಗ್ಗಕ್ಕೆ ಆಗಮಿಸಿ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ದರು.ಇದೀಗ ಮಂಗಳೂರಿನಲ್ಲಿ ಮೋದಿ ಪ್ರಚಾರ ನಡೆಸುವುದು ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ರವರಿಗೆ ಲಾಭವಾಗಲಿದೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!