Thursday, June 4, 2026
Homeಕರಾವಳಿಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರ; ಆಗಸ್ಟ್.22ರಂದು ಮಹತ್ವದ...

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರ; ಆಗಸ್ಟ್.22ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ

- Advertisement -
- Advertisement -

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಆಗಸ್ಟ್.22ರಂದು ಸಿಎಂ ಸಿದ್ದರಾಮಯ್ಯ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗಸ್ಟ್.22ರ ಗುರುವಾರ ಸಂಜೆ.4 ಗಂಟೆಗೆ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ.

ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಗಸ್ಟ್.22ರಂದು ನಡೆಸಿದ ಬಳಿಕ, ಶಾಸಕರ ಅಭಿಪ್ರಾಯವನ್ನು ಪಡೆದು, ಆಗಸ್ಟ್.23ರಂದು ದೆಹಲಿಗೆ ಸಿಎಂ ಸಿದ್ಧರಾಮಯ್ಯ ತೆರಳಲಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲಿರುವಂತ ಅವರು, ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ.

- Advertisement -

Latest News

error: Content is protected !!