Sunday, August 30, 2026
Homeಕರಾವಳಿಫೆಬ್ರವರಿ 28 ರಂದು ಮಂಗಳೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ಫೆಬ್ರವರಿ 28 ರಂದು ಮಂಗಳೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ

- Advertisement -
- Advertisement -

ಮಂಗಳೂರು: ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ ಫೆಬ್ರವರಿ 28 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.‌ ಕೇಂದ್ರ ಸರ್ಕಾರದ ಅನುದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳಿಗೆ ಮರು ಚಾಲನೆ ಕಾರ್ಯಕ್ರಮದಲ್ಲಿ ಗಡ್ಕರಿ ಭಾಗವಹಿಸಲಿದ್ದಾರೆ.

ಮಂಗಳೂರಿನ ಕುಲಶೇಖರ ಕೋರ್ಡೇಲ್ ಚರ್ಚ್ ಹಾಲ್ ಬಳಿ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.‌ ಸಮಾರಂಭದಲ್ಲಿ ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರು ಹಾಗೂ ಸಚಿವರು ಪಾಲ್ಗೊಳ್ಳಲಿದ್ದಾರೆ.

- Advertisement -

Latest News

error: Content is protected !!