Tuesday, May 21, 2024
Homeಪ್ರಮುಖ-ಸುದ್ದಿಮೇ. 3 ರಂದು ಬೆಂಗಳೂರಿಗೆ ಆಗಮಿಸಲಿರುವ ಸಂಸದ ಪ್ರಜ್ವಲ್ ರೇವಣ್ಣ; ಮೇ.4 ರಂದು ವಿಚಾರಣೆಗೆ ಹಾಜರಾಗುವ...

ಮೇ. 3 ರಂದು ಬೆಂಗಳೂರಿಗೆ ಆಗಮಿಸಲಿರುವ ಸಂಸದ ಪ್ರಜ್ವಲ್ ರೇವಣ್ಣ; ಮೇ.4 ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಬಂಧ ಈಗಾಗಲೇ ಎಸ್ ಐಟಿ  ಪ್ರಜ್ವಲ್ ರೇವಣ್ಣ  ಹಾಗೂ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ಇನ್ನು ಪ್ರಕರಣ ಹೊರ ಬರುತ್ತಿದ್ದಂತೆ ಪ್ರಜ್ವಲ್ ಜರ್ಮನಿಗೆ ಪರಾರಿಯಾಗಿದ್ದರು.ಇದೀಗ ಅವರು ಮೇ. 3 ರಂದು ಬೆಂಗಳೂರಿಗೆ ಬರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಮೇ. 4 ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು  ಜರ್ಮನಿಗೆ ಹೋಗುವ ಮೊದಲೇ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಜರ್ಮನಿಗೆ ತೆರಳಲು ಲುಪ್ತಾನ್ಸಾ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆ.

ಮೇ.3 ರ ಮಧ್ಯಾಹ್ನ 1.30 ಕ್ಕೆ ಫ್ರಾಂಕ್ ಫರ್ಟ್ ನಿಂದ ವಿಮಾನವು ಹೊರಡಲಿದ್ದು, ರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್ ಐಟಿಗೆ ನೀಡುವ ಮುನ್ನವೇ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಹೋಗುತ್ತಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿರುವ ಕಾರಣ ಮೇ. 3 ರಂದು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಅಲ್ಲದೇ ಮೇ. 4 ರಂದು ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ಪರ ವಕೀಲರು ಕಾಲವಕಾಶ ಕೇಳಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!