Wednesday, June 3, 2026
Homeಕರಾವಳಿಒಂದಲ್ಲ‌‌ ಒಂದು ದಿನ ಕೇಸರಿ ಧ್ವಜವೇ ರಾಷ್ಟ್ರ ಧ್ವಜ ಆಗಬಹುದು: ಕುತ್ತಾರಿನಲ್ಲಿ ಕಲ್ಲಡ್ಕ ಪ್ರಭಾಕರ ಭಟ್...

ಒಂದಲ್ಲ‌‌ ಒಂದು ದಿನ ಕೇಸರಿ ಧ್ವಜವೇ ರಾಷ್ಟ್ರ ಧ್ವಜ ಆಗಬಹುದು: ಕುತ್ತಾರಿನಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ

- Advertisement -
- Advertisement -

ಮಂಗಳೂರು: ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.‌


ಕುತ್ತಾರಿನ ಕೊರಗಜ್ಜ ಕ್ಷೇತ್ರದ ನಡೆ ಸಮಾರೋಪದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ‌ ನೀಡಿದ್ದಾರೆ.

ಅಲ್ಲದೇ ಕಾಂಗ್ರೆಸ್ ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡ್ತೇನೆ ಎಂದು ಪ್ರಭಾಕರ ಭಟ್ ಹೇಳಿದ್ದಾರೆ.‌

ಇನ್ನು ಮೊದಲು ಬ್ರಿಟಿಷರ ಧ್ವಜ ಇತ್ತು. ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು ಎಂದು ಹೇಳಿರುವ ಕಲ್ಲಡ್ಕ‌ ಪ್ರಭಾಕರ್ ಭಟ್, ಅಕಸ್ಮಾತ್ ಪಾರ್ಲಿಮೆಂಟ್ ನಲ್ಲಿ ಬಹುಮತ ಪಡೆದರೆ ಧ್ವಜ ಬದಲು ಮಾಡಬಹುದು, ಧ್ವಜ ಬದಲು ಮಾಡಲು ಆಗಲ್ಲ ಅಂತ ಏನೂ ಇಲ್ಲ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!