Thursday, June 4, 2026
Homeತಾಜಾ ಸುದ್ದಿಗುಂಡ್ಯ; ಶಿರಾಡಿ ಘಾಟ್ ನಲ್ಲಿ ಎರಡು ಕಾರುಗಳ ನಡುವೆ ನಡೆದ ಅಪಘಾತ; ಓರ್ವ ಸಾವು, ಇಬ್ಬರಿಗೆ...

ಗುಂಡ್ಯ; ಶಿರಾಡಿ ಘಾಟ್ ನಲ್ಲಿ ಎರಡು ಕಾರುಗಳ ನಡುವೆ ನಡೆದ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಗುಂಡ್ಯ; ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೆಪ್ಟೆಂಬರ್ 9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ.ಹಾಸನದ ನಿವಾಸಿ ಚಂದ್ರೇಗೌಡ (50) ಮೃತ ದುರ್ದೈವಿ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ರಸ್ತೆಯಲ್ಲೇ ತಿರುಗಿದ ಕಾರು ಅದರ ಹಿಂದಿದ್ದ ಹಾಸನದ ಕಡೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಇನ್ನೊಂದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!