Thursday, June 4, 2026
Homeಕರಾವಳಿಮಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವ ಘಟನೆ;  ಫುಟ್ ಬಾಲ್  ಆಟದ ವಿಚಾರಕ್ಕೆ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ...

ಮಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವ ಘಟನೆ;  ಫುಟ್ ಬಾಲ್  ಆಟದ ವಿಚಾರಕ್ಕೆ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಫೈಟ್; ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಸ್ಟುಡೆಂಟ್ಸ್

- Advertisement -
- Advertisement -

ಮಂಗಳೂರು : ಫುಟ್ ಬಾಲ್  ಆಟದ ವಿಚಾರಕ್ಕೆ ಜಗಳ ಉಂಟಾಗಿ ವಿದ್ಯಾರ್ಥಿಗಳ ಗುಂಪೊಂದು ಮತ್ತೊಂದು ಗುಂಪಿನ ವಿದ್ಯಾರ್ಥಿಗಳನ್ನು ಅಪಹರಣ ಮಾಡಿ ಹಲ್ಲೆ ನಡೆಸಿರುವ ಬೆಚ್ಚಿ ಬೀಳಿಸುವ ಘಟನೆ ಮಂಗಳೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಆಗಸ್ಟ್ 14 ರಂದು ಮಂಗಳೂರಿನ ನೆಹರು ಮೈದಾನಿನಲ್ಲಿ ಸ್ವಾತಂತ್ರೋತ್ಸವ ಹಿನ್ನೆಲೆ ಫುಟ್ ಬಾಲ್ ಪಂದ್ಯಾಟ ಆಯೋಜಿಸಲಾಗಿತ್ತು. ಈ ವೇಳೆ  ಮಂಗಳೂರಿನ ಪ್ರತಿಷ್ಠಿತ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಜಗಳ ಉಂಟಾಗಿದೆ. ಫುಟ್ಬಾಲ್ ಆಟದ ವೇಳೆ ಮೊಹಮ್ಮದ್ ಮತ್ತು ಆತನ ಸ್ನೇಹಿತರಾದ ಮೊಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಪಾರಿಸ್ ಮತ್ತು ಮೊಹಮ್ಮದ್ ಜುನೈದ್ ಇನ್ನೊಂದು ಟೀಂಗೆ ಸಪೋರ್ಟ್ ಮಾಡಿದ್ದಾರೆ ಎಂದು ಆರೋಪಿಸಿ, ದಿಯಾನ್, ತಸ್ಲಿಂ, ಸಲ್ಮಾನ್ ಮತ್ತಿತರರು ಮೊಹಮ್ಮದ್ ರನ್ನು ಪಾಂಡೇಶ್ವರ ಫೋರಂ ಮಾಲ್ ಬಳಿಯಿಂದ ಕಾರಿನಲ್ಲಿ ಅಪಹರಿಸಿ ಮಹಾಕಾಳಿ ಪಡ್ಡು ಬಳಿ ಕಾಲಿನಿಂದ ತುಳಿದು, ಸಿಗರೇಟ್ ನಿಂದ ಸುಟ್ಟು ಗಂಭಿರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಅಲ್ಲದೇ  ಅವರ ಸ್ನೇಹಿತರನ್ನು ಕರೆಸಿ ಕಾರಿನಲ್ಲಿ ಕೂರಿಸಿ ಕಣ್ಣೂರು ಮಸೀದಿ ಬಳಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕರೆದೊಯ್ದು ಮತ್ತಷ್ಟು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳನ್ನು ಅರೆಬೆತ್ತಲೆಗೊಳಿಸಿ ಬಸ್ಕಿ ಹೊಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಬಗ್ಗೆ 9 ಜನರ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ದಿಯಾನ್ ಮತ್ತು ಸಲ್ಮಾನ್ ಎಂಬ ಇಬ್ಬರನ್ನು ಬಂಧಿಸಲಾಗಿದೆ.ಉಳಿದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!