Sunday, August 16, 2026
HomeUncategorizedಬೆಂಗಳೂರಿನಲ್ಲಿ 1 ವಾರಗಳ ಕಾಲ ಲಾಕ್ ಡೌನ್ ?

ಬೆಂಗಳೂರಿನಲ್ಲಿ 1 ವಾರಗಳ ಕಾಲ ಲಾಕ್ ಡೌನ್ ?

- Advertisement -
- Advertisement -

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕಿತ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಕೂಡ ಕೊರೊನಾಗೆ ಬ್ರೇಕ್ ಹಾಕೋದಕ್ಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಳ್ಳೋದಕ್ಕೆ ಮುಂದಾಗಿದೆ. ಹಾಗಾಗಿ ಇಂದು ತಜ್ಞರ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ. ಅಲ್ಲದೇ 8 ಮಂದಿ ಸಚಿವರು ಕೂಡ ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡೋದಕ್ಕೆ ಒಲವು ತೋರಿಸಿದ್ದಾರೆ ಎನ್ನಲಾಗಿದೆ.

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರೋದರಿಂದ ರಾಜ್ಯ ಸರ್ಕಾರ ಸಿಲಿಕಾನ್ ಸಿಟಿಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡೋದಕ್ಕೆ ಚಿಂತಿಸಲಾಗಿದೆ. ಹಾಗಾಗಿ ಮುಂದಿನ ಬುಧವಾರದ ಬಳಿಕ ಲಾಕ್ ಡಾನ್ ಆಗುವ ಸಾಧ್ಯತೆ ಇದೆ.

- Advertisement -

Latest News

error: Content is protected !!