Wednesday, July 15, 2026
Homeತಾಜಾ ಸುದ್ದಿಮೊಬೈಲ್ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದವ ಅಂದರ್- ಮೊಬೈಲ್ ನೋಡಿ ಸುಸ್ತಾದ ಪೊಲೀಸರು!..

ಮೊಬೈಲ್ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದವ ಅಂದರ್- ಮೊಬೈಲ್ ನೋಡಿ ಸುಸ್ತಾದ ಪೊಲೀಸರು!..

- Advertisement -
- Advertisement -

ಚಿತ್ರದುರ್ಗ: ಇಲ್ಲಿನ ಚಳ್ಳಕೆರೆಯಲ್ಲಿ ವ್ಯಕ್ತಿಯೋರ್ವ ಮಹಿಳೆಯರ ಮೊಬೈಲ್ ಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನ ಮೊಬೈಲ್ ಪರಿಶೀಲಿಸಿದ ಪೊಲೀಸರೇ ಸುಸ್ತಾಗಿದ್ದಾರೆ. ಈತನು ಹಲವು ಮಹಿಳೆಯರಿಗೆ ಅಕ್ರಮವಾಗಿ ಅವರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.

ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ರಾಮಕೃಷ್ಣ(55) ಎನ್ನಲಾಗಿದ್ದು ಈತ ನೂರಾರು ಮಹಿಳೆಯರ ನಂಬರ್ ಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ವಿಡಿಯೋ, ಸಂದೇಶಗಳಿರುವ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!