Wednesday, June 24, 2026
Homeತಾಜಾ ಸುದ್ದಿಪದವಿ, ಸ್ನಾತಕೋತ್ತರ ಕೋರ್ಸ್ ಗಳಿಗೆ ಆನ್ ಲೈನ್ ಪ್ರವೇಶ: ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್...

ಪದವಿ, ಸ್ನಾತಕೋತ್ತರ ಕೋರ್ಸ್ ಗಳಿಗೆ ಆನ್ ಲೈನ್ ಪ್ರವೇಶ: ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಆದೇಶ

- Advertisement -
- Advertisement -

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ (2022-23) ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆನ್ ಲೈನ್ ವಿಧಾನದ ಮೂಲಕವೇ ನಡೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿರುವ ಸಚಿವರು, ಕಾಲೇಜು ಶಿಕ್ಷಣ ಇಲಾಖೆ, ವಿ.ವಿ.ಗಳು ಮತ್ತು ವಿವಿ ಕಾಲೇಜುಗಳು ಇದಕ್ಕಾಗಿ https://uucms.karnataka.gov.in/ ವಿಳಾಸವನ್ನು ತಮ್ಮ ವೆಬ್ ಸೈಟುಗಳಲ್ಲಿ ಲಿಂಕ್ ಮಾಡಿ, ಲಭ್ಯವಾಗುವಂತೆ ಮಾಡಬೇಕು ಎಂದು ತಿಳಿಸಿದ್ದಾರೆ.

ಇದರ ಜೊತೆಗೆ ಎಲ್ಲಾ ಕಾಲೇಜುಗಳೂ ಪ್ರವೇಶಾತಿಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್ ಸೈಟ್ ಗಳಲ್ಲಿ ಪ್ರಕಟಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರು ಸೂಚಿಸಿದ್ದಾರೆ.

ಆನ್ ಲೈನ್ ಪ್ರವೇಶಾತಿ ಆದೇಶ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯಗಳು ಮತ್ತು ವಿಶ್ವವಿದ್ಯಾಲಯ ಅಧೀನದ ಕಾಲೇಜುಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಡಾ. ಅಶ್ವಥ್ ನಾರಾಯಣ ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!