Thursday, May 16, 2024
Homeತಾಜಾ ಸುದ್ದಿದ್ವಿತೀಯ 'PUC' ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ದ್ವಿತೀಯ 'PUC' ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

spot_img
- Advertisement -
- Advertisement -

ಬೆಂಗಳೂರು: ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕೆ ಪೂರಕ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ಇದರ ಮಧ್ಯೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮಹತ್ವದ ಸೂಚನೆಯನ್ನು ಹೊರಡಿಸಿದ್ದು, ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಸಲು ನಿರ್ದೇಶಿಸಿದ್ದಾರೆ.

ಕಳೆದ ಮೂರು ತಿಂಗಳ ಅಂತರದಿಂದಾಗಿ ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುವ ಕಾರಣ ಆನ್ಲೈನ್ ಮೂಲಕ ಪುನರ್ಮನನ ತರಗತಿ ನಡೆಸಬೇಕೆಂದು ಸೂಚಿಸಲಾಗಿದ್ದು, ಈ ಕುರಿತು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಇಂಗ್ಲಿಷ್ ಉಪನ್ಯಾಸಕರು ವಿಶೇಷ ಗಮನ ಹರಿಸಬೇಕೆಂದು ತಿಳಿಸಲಾಗಿದೆ.

ತಾತ್ಕಾಲಿಕ ಪಟ್ಟಿ ಬಿಡುಗಡೆ:
ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದ ತಾತ್ಕಾಲಿಕ ಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಇದಾಗಿದೆ.

ಇದು ಕೇವಲ ತಾತ್ಕಾಲಿಕ ಪಟ್ಟಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ತಿದ್ದುಪಡಿಗಳು ಇದ್ದರೆ ಸಂಬಂಧ ಪಟ್ಟ ಕಾಲೇಜುಗಳ ಪ್ರಾಚಾರ್ಯರ ಮೂಲಕ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ತಿದ್ದುಪಡಿಗೆ ಜೂನ್ 5ರವೆರೆಗೆ ಅವಕಾಶ ಕಲ್ಪಿಸಲಾಗಿದೆ.

ತಾತ್ಕಾಲಿಕ ಪಟ್ಟಿಯನ್ನು ಈ ಲಿಂಕ್​ನಲ್ಲಿ ನೋಡಬಹುದು http://pue.kar.nic.in

- Advertisement -
spot_img

Latest News

error: Content is protected !!