Friday, May 17, 2024
Homeಕರಾವಳಿಇನ್ಮುಂದೆ ಗ್ರಾಮ ಪಂಚಾಯತ್ ಲೈಬ್ರೆರಿಯಲ್ಲೂ ಆನ್ ಲೈನ್ ಪಾಠ!

ಇನ್ಮುಂದೆ ಗ್ರಾಮ ಪಂಚಾಯತ್ ಲೈಬ್ರೆರಿಯಲ್ಲೂ ಆನ್ ಲೈನ್ ಪಾಠ!

spot_img
- Advertisement -
- Advertisement -

ಬೆಂಗಳೂರು: ಆನ್ ಲೈನ್ ಶಿಕ್ಷಣದ ಸೌಲಭ್ಯ ವಂಚಿತ ಮಕ್ಕಳಿಗೆ ಸಹಾಯವಾಗಲು ಶಿಕ್ಷಣ ಇಲಾಖೆ ಯೋಜನೆಯೊಂದನ್ನು ರೂಪಿಸಲು ಮುಂದಾಗಿದೆ. ಡಿಜಿಟಲ್ ಶಿಕ್ಷಣ ಅಥವಾ ಆನ್ ಲೈನ್ ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ.

ರಾಜ್ಯದಲ್ಲಿರುವ 5766 ಗ್ರಾಮ ಪಂಚಾಯತ್ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ದೂರದರ್ಶನ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚಾ ಪ್ರಕ್ರಿಯೆಗಳು ಶಿಕ್ಷಣ ಇಲಾಖೆಯ ಮಟ್ಟದಲ್ಲಿ ಚಾಲನೆಯಲ್ಲಿವೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಗ್ರಾಮೀಣ ಮಕ್ಕಳ ಶಿಕ್ಷಣ ಮುಂದುವರಿಕೆ ಮತ್ತು ಕಲಿಕಾ ನಿರಂತರತೆಗೆ ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ.

ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಉತ್ತಮಗೊಳಿಸುವುದು ಸೇರಿದಂತೆ ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಕುರಿತಂತೆ ಎಸ್ ಎಸ್ ಎಲ್ ಸಿ ಪರೀಕ್ಷಾ ಅವಧಿ ಮುಗಿದ ಕೂಡಲೇ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲು ಶಿಕ್ಷಣ ಇಲಾಖೆ ಚಿಂತಿಸಿದೆ. ಶಿಕ್ಷಣ ಇಲಾಖೆಯ ಟಾಸ್ಕ್ ಫೋರ್ಸ್ ಈ ಎಲ್ಲ ಅಂಶಗಳನ್ನು ಅವಲೋಕಿಸಿ ಪ್ರಾಯೋಗಿಕ ಕ್ರಮಗಳ ಕುರಿತಂತೆ ಕ್ರಿಯಾಯೋಜನೆ ರೂಪಿಸಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!