Friday, June 5, 2026
Homeತಾಜಾ ಸುದ್ದಿಇನ್ಮೇಲೆ ಅಂತ್ಯಕ್ರಿಯೆಯಲ್ಲಿ 5 ಜನರಿಗಷ್ಟೇ ಭಾಗಿಯಾಗಲು ಅವಕಾಶ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಇನ್ಮೇಲೆ ಅಂತ್ಯಕ್ರಿಯೆಯಲ್ಲಿ 5 ಜನರಿಗಷ್ಟೇ ಭಾಗಿಯಾಗಲು ಅವಕಾಶ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

- Advertisement -
- Advertisement -

ಬೆಂಗಳೂರು: ಅಂತ್ಯಕ್ರಿಯೆ ವೇಳೆ ಕೇವಲ ಐವರಿಗೆ ಮಾತ್ರ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐದು ಜನಕ್ಕಿಂತ ಹೆಚ್ಚು ಜನರು ಅಂತ್ಯಕ್ರಿಯೆ ವೇಳೆ ಭಾಗವಹಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ದಿನೇ ದಿನೇ ಕೊರೊನಾ ಸೋಂಕಿತರು ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವ ಕಾರಣ ರಾಜ್ಯ ಸರ್ಕಾರ ಹೊಸ ಆದೇಶ ಪ್ರಕಟಿಸಿದೆ.

ಈ ಮೊದಲು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದ್ದ ಆದೇಶದಲ್ಲಿ ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶ ನೀಡಲಾಗಿತ್ತು. ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಇಂದು (ಏಪ್ರಿಲ್ 25) ಒಂದೇ ದಿನ ಒಟ್ಟು 34,804 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 143 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 20,733 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಒಂದೇ ದಿನ ಸೋಂಕಿಗೆ 77 ಜನರು ಬಲಿಯಾಗಿದ್ದಾರೆ.

- Advertisement -

Latest News

error: Content is protected !!