Saturday, June 6, 2026
Homeತಾಜಾ ಸುದ್ದಿರಾಜ್ಯದ ಹಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಸ್ಥಗಿತ; ಚಿಕಿತ್ಸೆಗಾಗಿ ರೋಗಿಗಳ ಪರದಾಟ

ರಾಜ್ಯದ ಹಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಸ್ಥಗಿತ; ಚಿಕಿತ್ಸೆಗಾಗಿ ರೋಗಿಗಳ ಪರದಾಟ

- Advertisement -
- Advertisement -

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರಕ್ಕೆ ಇಂದಿನಿಂದ ಕರೆ ನೀಡಿದ್ದಾರೆ. ಇದಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಬೆಂಬಲ ನೀಡಿದ್ದು, ರಾಜ್ಯದ ಹಲವೆಡೆ  ಜಿಲ್ಲಾಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್ ಆಗಿದೆ.

ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆ, ತುಮಕೂರು ಜಿಲ್ಲಾಸ್ಪತ್ರೆ, ಮೈಸೂರಿನ ಕೆ ಆರ್ ಆಸ್ಪತ್ರೆ, ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗಳಲ್ಲಿ ಒಳರೋಗಿಗಳ ಚಿಕಿತ್ಸೆಯ ಸೇವೆಯನ್ನು ಬಂದ್ ಮಾಡಲಾಗಿದೆ. ಕೇವಲ ತುರ್ತು ಸೇವೆಯನ್ನು ಮಾತ್ರವೇ ಒದಗಿಸಲಾಗುತ್ತಿದ್ದು ರೋಗಿಗಳು ಪರದಾಡುತ್ತಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಪಘಾತ, ತುರ್ತು ಚಿಕಿತ್ಸೆಗೆ ಮಾತ್ರವೇ ಸೇವೆಯನ್ನು ಒದಗಿಸಲಾಗುತ್ತಿದ್ದು, ಇನ್ನುಳಿದಂತೆ ಒಪಿಡಿ ಸೇವೆಯನ್ನು ಸಂಪೂರ್ಣವಾಗಿ ಬಂದ್ ಮಾಡಿರೋ ಕಾರಣ ರೋಗಿಗಳು ಪರದಾಡುವಂತೆ ಆಗಿದೆ.

ಕೇವಲ ಜಿಲ್ಲಾಸ್ಪತ್ರೆಯಷ್ಟೇ ಅಲ್ಲದೇ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಒಪಿಡಿ ಸೇವೆಯನ್ನು ಇಂದು ಬಂದ್ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.

- Advertisement -

Latest News

error: Content is protected !!