Friday, June 5, 2026
Homeತಾಜಾ ಸುದ್ದಿನಾಳೆ ರಾಜ್ಯಾಧ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸ್ಥಗಿತ, ತುರ್ತು ಸೇವೆಗಳಷ್ಟೇ ಲಭ್ಯ

ನಾಳೆ ರಾಜ್ಯಾಧ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸ್ಥಗಿತ, ತುರ್ತು ಸೇವೆಗಳಷ್ಟೇ ಲಭ್ಯ

- Advertisement -
- Advertisement -

ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಾಳೆಯಿಂದ ಸರ್ಕಾರಿ ನೌಕರರ ಸಂಘದಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರಕ್ಕೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ ನೀಡಿದ್ದು, ನಾಳೆ ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಆಗಲಿದ್ದು, ತುರ್ತು ಸೇವೆ ಮಾತ್ರ ಲಭ್ಯವಾಗಲಿದೆ.

ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ ಅವರು, ನಾಳೆ ಯಾವುದೇ ಒಪಿಡಿ ಸೇವೆ ಇರುವುದಿಲ್ಲ. ನಾಳೆಯಿಂದ ರಾಜ್ಯದಲ್ಲಿ ಕೇವಲ ತುರ್ತು ಸೇವೆಗಳು ಮಾತ್ರ ಸಿಗಲಿದೆ. ಅಪಘಾತ, ಹೆರಿಗೆ ಸೇರಿದಂತೆ ತುರ್ತು ಸೇವೆಗಳು ಮಾತ್ರ ಇರುತ್ತದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ 3 ಪ್ರಮುಖ ಆಸ್ಪತ್ರೆ, 105 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 19 ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಆಗಲಿದೆ. ನಮ್ಮ ಹೋರಾಟ 7ನೇ ವೇತನ ಆಯೋಗ ಜಾರಿಯಾಗೋವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!