Friday, June 27, 2025
Homeಕರಾವಳಿಮಂಗಳೂರು: ಸೆ.17 ರಿಂದ ಶಾಲೆಗಳ ಆರಂಭ; ಶುಲ್ಕ ಪಾವತಿಗೆ ಒತ್ತಾಯಿಸುವಂತಿಲ್ಲ;ಡಿಸಿ ಡಾ. ರಾಜೇಂದ್ರ.ಕೆ.ವಿ

ಮಂಗಳೂರು: ಸೆ.17 ರಿಂದ ಶಾಲೆಗಳ ಆರಂಭ; ಶುಲ್ಕ ಪಾವತಿಗೆ ಒತ್ತಾಯಿಸುವಂತಿಲ್ಲ;ಡಿಸಿ ಡಾ. ರಾಜೇಂದ್ರ.ಕೆ.ವಿ

spot_img
- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆ. 17ರಿಂದ 8, 9 ಮತ್ತು 10ನೇ ತರಗತಿ ಹಾಗೂ ಸೆ. 20ರಿಂದ 6 ಮತ್ತು 7ನೇ ತರಗತಿಗಳನ್ನು ಆರಂಭಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಜೊತೆಗೆ ಎಲ್ಲಾ ಪ್ರಥಮ ಪಿ.ಯು.ಸಿ ತರಗತಿಗಳನ್ನು ಶೀಘ್ರದಲ್ಲಿ ಆರಂಭಿಸಲು ಸೂಚಿಸಲಾಗಿದೆ.

ಶಾಲಾ ಆರಂಭದ ಬಗ್ಗೆ ಇದ್ದ ಗೊಂದಲದ ಬಗ್ಗೆ ದ.ಕ. ಜಿಲ್ಲಾಧಿಕಾರಿಗಳು ಸೋಮವಾರ ಸಭೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಹಾಗೂ ಕೋವಿಡ್ ನಿಯಮ ಪಾಲಿಸಿಕೊಂಡು ಶಾಲೆ ಆರಂಭಿಸಲು ಅನುಮತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಶೇ.99 ರಷ್ಟು ಶಾಲಾ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳಿಗೆ ಲಸಿಕೆಯನ್ನು ನೀಡಲಾಗಿದೆ. ಮಕ್ಕಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಅಂತವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪತ್ತೆ ಮಾಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶಾಲೆಗಳು ಆರಂಭವಾದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಶಿಕ್ಷಕರು ಸೂಕ್ತ ಮಾಹಿತಿಯನ್ನು ನೀಡಬೇಕು ಎಂದರು.

ಸದ್ಯ ಜಿಲ್ಲೆಯಲ್ಲಿ 261 ಮಕ್ಕಳು ಕೋವಿಡ್‌ ಚಿಕಿತ್ಸೆ ಪಡೆಯುತ್ತಿದ್ದು, ಮಕ್ಕಳಲ್ಲಿ ಕೋವಿಡ್‌ ಲಕ್ಷಣ ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೂ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ಇದರ ಜೊತೆಗೆ ಮಕ್ಕಳಲ್ಲಿ ಶುಲ್ಕ ಪಾವತಿಸಲು ಒತ್ತಾಯಿಸಬಾರದು. ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ, ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

ಭೌತಿಕ ತರಗತಿಗೆ ಹಾಜರಾಗುವ ಸಂಬಂಧ ಪೋಷಕರ ಅನುಮತಿಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು.ಭೌತಿಕ ತರಗತಿ ಆರಂಭದ ಬಳಿಕವೂ ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಬೇಕು. ಕೇರಳದಿಂದ ಬರುವ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಉಳಿದು ಕೊಳ್ಳುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಆನ್‌ಲೈನ್‌ ಮೂಲಕ ತರಗತಿಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎನ್‌. ಮಾಣಿಕ್ಯ (ಪ್ರಭಾರ), ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಕಿಶೋರ್‌, ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ, ಖಾಸಗಿ ಶಾಲಾ ಅಸೋಸಿಯೇಶನ್‌ನ ಮುಖ್ಯಸ್ಥರು, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!