- Advertisement -
![]()
- Advertisement -
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಇದರ ಸುರತ್ಕಲ್ ವಲಯ ಕಚೇರಿಯನ್ನು ಶನಿವಾರ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, ಸುರತ್ಕಲ್‌ನಲ್ಲಿ ಹೈಟೆಕ್ ಆಗಿರುವ ವಿಭಾಗೀಯ ಕಚೇರಿ ಪ್ರಾರಂಭಗೊಂಡಿದೆ. ಇದಕ್ಕಾಗಿ ಪಾಲಿಕೆ ಮೇಯರ್ ಸಹಿತ ಇಡೀ ತಂಡಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಜನರು ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ಬಳಸಿಕೊಳ್ಳಲು ಇದು ನೆರವಾಗಲಿದೆ ಎಂದು ಶುಭ ಹಾರೈಸಿದರು.
ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ಸುರತ್ಕಲ್ ವಲಯ ಕಚೇರಿಯಲ್ಲಿ ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸುರತ್ಕಲ್‌ನಲ್ಲಿ ವಲಯ ಕಚೇರಿಯನ್ನು ಪ್ರಾರಂಭವಾಗಿದ್ದು, ಈ ಮೂಲಕ ಜನರು ಮಂಗಳೂರಿಗೆ ಅಲೆದಾಡುವುದು ತಪ್ಪಲಿದೆ ಎಂದರು.
- Advertisement -


