- Advertisement -
![]()
- Advertisement -
ಹೆಬ್ರಿ: ಹೆಬ್ರಿ ಇನ್ಸ್ ಪೆಕ್ಟರ್ ಸುದರ್ಶನ್ ದೊಡ್ಡಮನೆ ನೇತೃತ್ವದಲ್ಲಿ ಗೋಕಳ್ಳರ ವಿರುದ್ಧ ಕಾರ್ಯಾಚರಣೆ ನಡೆದಿದ್ದು. ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಪೊಲೀಸರು ಬೆನ್ನಟ್ಟಿ ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಗೋ ಸಾಗಾಟ ಮಾಡುತ್ತಿದ್ದ ವಾಹನ ಸೇರಿ 14 ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ.
ಹೆಬ್ರಿ ಬ್ಯಾಣ ಪರಿಸರದಲ್ಲಿ ಈ ಕಾರ್ಯಾಚರಣೆ ನಡೆಯಿತು. ಹೆಬ್ರಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಗೋ ಸಾಗಾಟಗಾರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟುವಾಗ, ಗೋಕಳ್ಳರ ವಾಹನ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭ ವಾಹನವನ್ನು ಸ್ಥಳದಲ್ಲೇ ಬಿಟ್ಟು ಗೋಕಳ್ಳರು ಪರಾರಿಯಾಗಿದ್ದಾರೆ. ಗೋಕಳ್ಳರು ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಕಟ್ಟಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು .ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -


