Thursday, June 4, 2026
Homeಕರಾವಳಿಕಡಬದಲ್ಲಿ ಆಪರೇಷನ್ ಚೀತಾ ಕಾರ್ಯಾಚರಣೆ ಪ್ಲಾಫ್: ಅಷ್ಟಕ್ಕೂ ಅಲ್ಲಿ ಆಗಿದ್ದೇನು ಗೊತ್ತಾ?

ಕಡಬದಲ್ಲಿ ಆಪರೇಷನ್ ಚೀತಾ ಕಾರ್ಯಾಚರಣೆ ಪ್ಲಾಫ್: ಅಷ್ಟಕ್ಕೂ ಅಲ್ಲಿ ಆಗಿದ್ದೇನು ಗೊತ್ತಾ?

- Advertisement -
- Advertisement -

ಕಡಬ:  ಸತತ ಕಾರ್ಯಾಚರಣೆಯ ಬಳಿಕವೂ ಸುಬ್ರಹ್ಮಣ್ಯ ಸಮೀಪದ ಕೈಕಂಬದಲ್ಲಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿಫಲವಾಗಿದ್ದಾರೆ. ಶೌಚಾಲಯದಲ್ಲಿ ಬಂಧಿಯಾಗಿದ್ದ ಚಿರತೆ ಕಾರ್ಯಾಚರಣೆ ವೇಳೆ ಓಡಿ ತಪ್ಪಿಸಿಕೊಂಡಿದೆ.

ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದೆ.  ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದರಿಂದ ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿತ್ತು. ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದು, ನಾಯಿ ಮತ್ತು ಚಿರತೆ ಎರಡೂ ಶೌಚಾಲಯದ ಒಳಗೆ ಬಂಧಿಯಾಗಿದ್ದವು.

ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾ ಅಧಿಕಾರಿಗಳು ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯ ವೇಳೆ ಚಿರತೆಯು ತಪ್ಪಿಸಿಕೊಂಡು ಕಾಡಿನತ್ತ ಓಡಿ ಪರಾರಿಯಾಗಿದೆ.ಇದರಿಂದ ಮತ್ತೆ ಚಿರತೆ ಬರಬಹುದು ಅನ್ನೋ ಆತಂಕದಲ್ಲಿ ಸುತ್ತಮುತ್ತಲಿನ ಜನ ಕಾಲ ಕಳೆಯುವಂತಾಗಿದೆ.

- Advertisement -

Latest News

error: Content is protected !!