Wednesday, May 8, 2024
Homeತಾಜಾ ಸುದ್ದಿಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

spot_img
- Advertisement -
- Advertisement -

ಬೆಂಗಳೂರು: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಖಾರವಾಗಿ ಪ್ರತಿಕ್ರಿಯಿಸಿದರು.

ಬಿಜೆಪಿಯ ಅಧಿಕಾರ ದಾಹ ಎಷ್ಟು ಕೆಟ್ಟದಾಗಿದೆ ಎಂದರೆ, ಮುಂದಿನ ದಿನಗಳಲ್ಲಿ ಸ್ಪಷ್ಟ ಬಹುಮತ ಬಂದ ಸರಕಾರವೂ  ಉಳಿಯುವುದು ಅನುಮಾನ. ಈ ಬಿಜೆಪಿ‌ ಪೂರ್ಣ ಬಹುಮತ ಪಡೆದ ಇತರೆ ಯಾವುದೇ ಪಕ್ಷದ ಸರಕಾರದ  ಅವಧಿ ಮುಗಿಸುವುದಕ್ಕೂ ಬಿಡುವುದಿಲ್ಲ ಅನ್ನಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೇಲ್ನೋಟಕ್ಕೆ ಉದ್ದವ್ ಠಾಕ್ರೆ ಅವರು ಶಾಸಕರ ವಿಶ್ವಾಸ ಗಳಿಸಿಲ್ಲವೆಂದು ಹೇಳುತ್ತಿದ್ದಾರೆ. ಆದರೆ ಅದರ ಹಿಂದೆ ಇರುವುದು ಬಿಜೆಪಿಯೇ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು ಅವರು.

ಕರ್ನಾಟಕದಲ್ಲಿ ನನಗೂ‌ ಇದರ ಅನುಭವ ಆಗಿದೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲವೆಂದು ನನ್ನ ಮೇಲೂ  ಆರೋಪ ಮಾಡಿದರು. ಶಾಸಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಸುಳ್ಳು ಪ್ರಚಾರ ಮಾಡಿದರು. ನಾನು ಕಾಂಗ್ರೆಸ್ ಶಾಸಕರ ಕ್ಷೇತ್ರದ ಅಭಿವೃದ್ದಿಗೆ 19 ಸಾವಿರ ಕೋಟಿ ಕೊಟ್ಟೆ. ಆ ಪಕ್ಷದ ಶಾಸಕಾಂಗ ಪಕ್ಷದ ನಾಯಕರಿಗೆ ಆ ಮಾಹಿತಿ ಇದ್ದ ಪಟ್ಟಿಯನ್ನೇ ನೀಡಿದ್ದೆ. ಆದರೂ ಶಾಸಕರನ್ನು ಆಪರೇಶನ್ ಕಮಲ ಮಾಡಿ ಸರಕಾರವನ್ನು ತೆಗೆದರು ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮಹಾರಾಷ್ಟ್ರದ ಬಿಜೆಪಿ ನಡವಳಿಕೆ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ. ಈ ಅನಾಚಾರವನ್ನು ಬಿಜೆಪಿ ದೇಶವ್ಯಾಪಿ ವಿಸ್ತಾರ ಮಾಡುತ್ತಿದೆ. ಸಂವಿಧಾನ ರಕ್ಷಣೆ ಅನ್ನುವುದು ಇವತ್ತು ಉಳಿದಿಲ್ಲ. ಎಷ್ಟೇ ಒಳ್ಳೆಯ ಸರಕಾರ  ಮಾಡಿದರೂ ಬೆಲೆ ಇಲ್ಲದಂತೆ ಆಗಿದೆ ಎಂದು ಬಿಜೆಪಿ ವಿರುದ್ದ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

- Advertisement -
spot_img

Latest News

error: Content is protected !!