Sunday, May 12, 2024
Homeಕರಾವಳಿಕಡಬದಲ್ಲಿ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಇಂದಿನಿಂದ ಕಾರ್ಯಾಚರಣೆ; ಮೈಸೂರು, ದುಬಾರೆಯಿಂದ ಸಾಕಾನೆಗಳ ಆಗಮನ

ಕಡಬದಲ್ಲಿ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಇಂದಿನಿಂದ ಕಾರ್ಯಾಚರಣೆ; ಮೈಸೂರು, ದುಬಾರೆಯಿಂದ ಸಾಕಾನೆಗಳ ಆಗಮನ

spot_img
- Advertisement -
- Advertisement -

ಕಡಬ : ನಿನ್ನೆ ಮರ್ಧಾಳ‌ ಸಮೀಪದ ನೈಲ ಸಮೀಪ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯು ಎಲ್ಲಾ ತಯಾರಿ ಮಾಡಿಕೊಂಡಿದ್ದು, ನರ ಹಂತಕ ಕಾಡಾನೆಯನ್ನು ಸೆರೆಹಿಡಿಯಲು ಸಾಕಾನೆಗಳನ್ನು ತರಿಸಲಾಗಿದೆ.

ಸೋಮವಾರ ರಾತ್ರಿಯೇ ಲಾರಿಗಳ ಮೂಲಕ  ಮೈಸೂರು ಹಾಗೂ ದುಬಾರೆಯಿಂದ ಐದು ಆನೆಗಳು ಆಗಮಿಸಿದ್ದು, ಇಂದು ಬೆಳಗ್ಗಿನಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ.

ಅರಣ್ಯ ಇಲಾಖೆಯು ನರ ಹಂತಕ ಕಾಡಾನೆಯ ಚಲನವಲನ ಪತ್ತೆ ಹಚ್ಚಲು ಡ್ರೋನ್ ಬಳಸಿ ಮಾಹಿತಿ ಕಲೆ ಹಾಕಿತ್ತು. ಪೂರ್ವ ಸಿದ್ದತೆಯೊಂದಿಗೆ ಕಾಡಾನೆಯನ್ನು ಪತ್ತೆ ಹಚ್ಚಿ ಹಿಡಿದು ಬೇರೆಡೆ ಸ್ಥಳಾಂತರ ಮಾಡಲು ಅರಣ್ಯ ಇಲಾಖಾಧಿಕಾರಿಗಳು ಯೋಜನೆ ರೂಪಿಸಿದ್ದಾರೆ.

ನಿನ್ನೆ ಆನೆ ಇಬ್ಬರನ್ನು ಕೊಂದು ಹಾಕಿತ್ತು.  ಆಕ್ರೋಶಗೊಂಡ ಸ್ಥಳೀಯರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸ್ಥಳಾಂತರಗೊಳಿಸದೆ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದಕ್ಕೆ ಮಣಿದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಯನ್ನು ಸ್ಥಳಾಂತರಿಸುವ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಮೃತದೇಹವನ್ನು ವಾರಸುದಾರರಿಗೆ ನೀಡಲಾಗಿತ್ತು.

- Advertisement -
spot_img

Latest News

error: Content is protected !!