Monday, April 29, 2024
Homeಕರಾವಳಿಕಡಬದಲ್ಲಿ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭ

ಕಡಬದಲ್ಲಿ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭ

spot_img
- Advertisement -
- Advertisement -

ಕಡಬ: ನಿನ್ನೆ ಇಬ್ಬರನ್ನು ಬಲಿ ಪಡೆದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದೆ.  ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ 5 ಆನೆಗಳು ಕಡಬ ತಾಲೂಕಿನ ರೆಂಜಿಲಾಡಿಗೆ ಆಗಮಿಸಿವೆ. ಕಾಡಾನೆ ಸೆರೆ ಹಿಡಿಯುವುದರಲ್ಲಿ ಎಕ್ಸ್ ಫರ್ಟ್ ಗಳಾದ  ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆ ಆರಂಭಿಸಿವೆ.
ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಸಮೀಪ ಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ. ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ ಕಡಬಕ್ಕೆ ಆಗಮಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ತಂಡ ಅಲ್ಲಲ್ಲಿ ವೀಕ್ಷಣೆ ನಡೆಸಿ, ಡ್ರೋನ್ ಬಳಸಿ ಕಾಡಾನೆಯ ಚಲನ ವಲನಗಳನ್ನು ಪತ್ತೆ ಹಚ್ಚಲಾಗುತ್ತಿದೆ.ಕಾಡಾನೆಯನ್ನು ಸೆರೆ ಹಿಡಿಯಲು ಸಾಕಾನೆಗಳ ಸಹಕಾರ ಪಡೆಯಲಾಗುತ್ತದೆ. ಒಂದು ಕಾಡಾನೆ ಇರುವ ಜಾಗವನ್ನು ಪತ್ತೆ ಹಚ್ಚುವ ಕೆಲಸ ನಡೆಸುತ್ತಿದೆ‌.

- Advertisement -
spot_img

Latest News

error: Content is protected !!