Monday, June 30, 2025
Homeಕರಾವಳಿಸುಳ್ಯ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ: ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಸುಳ್ಯ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ: ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

spot_img
- Advertisement -
- Advertisement -

ಸುಳ್ಯ : ಈ ಬಾರಿಯ ಶ್ರೀ ಚೆನ್ನಕೇಶವ ದೇವರ ಈ ಹಿಂದೆ ಯಾವ ರೀತಿ ಸಂತೆ ಏಲಂ ಆಗುತ್ತಿತ್ತೋ ಹಾಗೆಯೇ ಮುಂದುವರಿಸಿ ಎಲ್ಲರಿಗೂ ಮುಕ್ತ ಅವಕಾಶ ನೀಡಲು ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಾತ್ರೋತ್ಸವದ ಬಗ್ಗೆ ಚರ್ಚಿಸಲು ಜ.2 ರಂದು ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಇದಕ್ಕೂ ಮೊದಲು ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಮನವಿ ದೇವಸ್ಥಾನ ಆಡಳಿತ ಸಮಿತಿಗೆ ಮನವಿ ಮಾಡಿತ್ತು. ಆದರೆ ಸಭೆಯಲ್ಲಿ ಸಂತೆ ವ್ಯಾಪಾರಕ್ಕೆ ಮುಕ್ತ ಅವಕಾಶ ನೀಡಿರುವುದರಿಂದ ಹಿಂಜಾವೇ ಹಿಂಜಾವೇ ಗೆ‌ ಹಿನ್ನಡೆಯಾಗಿದೆ.

ಅಂಗಡಿಗಳ ಏಲಂ ಬಗ್ಗೆ ದಾಮೋದರ ಮಂಚಿ ಮತ್ತು ರವಿ ಮತ್ತಿತರರು ವಿಷಯ ಪ್ರಸ್ತಾಪಿಸಿದರು. ಅದಕ್ಕೆ ಉತ್ತರಿಸಿದ ಕೃಪಾಶಂಕರ ಅಂಗಡಿಗಳ ಏಲಂ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮದಂತೆ ಮಾಡಿದ್ದೇವೆ ಎಂದು ಹೇಳಿದರು. ಆಗ ವೆಂಕಪ್ಪ ಗೌಡ, ಪಿ.ಎಸ್.ಗಂಗಾಧರ್, ಜಯಪ್ರಕಾಶ್ ರೈ, ಗೋಕುಲದಾಸ್ ಮತ್ತಿತರರು ಇಲಾಖೆಯ ನಿಯಮದಲ್ಲಿ ಏನೇನಿದೆ ಓದಿ ಹೇಳಿ ಎಂದು ಹೇಳಿದರು. ಧಾರ್ಮಿಕ ದತ್ತಿ ಇಲಾಖೆಯ ನಿಯಮವನ್ನು ಓದಿ ಅದರಲ್ಲಿ ದೇವಸ್ಥಾನಕ್ಕೆ ಸಂಬಂದಪಟ್ಟ ಕಟ್ಟಡದಲ್ಲಿ ಟೆಂಡರ್‌ನ್ನು ಇತರರಿಗೆ ನೀಡಬಾರದೆಂದು ಇತ್ತು. ಹೊರಗಿನ ಸಂತೆ ಏಲಂ ಬಗ್ಗೆ ಯಾವುದೇ ನಿಬಂಧನೆಗಳು ಇರಲಿಲ್ಲ. ಈ ಹಿನ್ನಲೆಯಲ್ಲಿ ಹಿಂದೆ‌ ಇದ್ದ ರೀತಿಯಲ್ಲಿ ಏಲಂ ಮಾಡಲು ನಿರ್ಧರಿಸಲಾಯಿತು.

- Advertisement -
spot_img

Latest News

error: Content is protected !!