Thursday, June 4, 2026
Homeಕರಾವಳಿಗುಳಿಗ ದೈವದ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ ಆರೋಪ; ಸಚಿವ ವಿರುದ್ಧ ಆಕ್ರೋಶ...

ಗುಳಿಗ ದೈವದ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ ಆರೋಪ; ಸಚಿವ ವಿರುದ್ಧ ಆಕ್ರೋಶ ಹೊರ ಹಾಕಿದ ದೈವ ನರ್ತಕರು

- Advertisement -
- Advertisement -

ಮಂಗಳೂರು: ಕರಾವಳಿಯ ಆರಾಧ್ಯ ದೈವಗಳಲ್ಲಿ ಒಂದಾದ ಗುಳಿಗ ದೈವದ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕರಾವಳಿಯ, ದೈವ ನರ್ತಕರು ಆಕ್ರೋಶ ಹೊರ ಹಾಕಿದ್ದಾರೆ.

ಗೃಹಸಚಿವರು ಕರಾವಳಿಯ ದೈವ ಸನ್ನಿಧಿಗೆ ಬಂದು ಕ್ಷಮೆ ಕೇಳಬೇಕು. ಗೃಹ ಸಚಿವರು ಫ್ಲೆಕ್ಸ್ ನೋಡಿ‌ ಗುಳಿಗೆ-ಗುಳಿಗೆ ಎಂದು ಹೇಳಿದ್ದಾರೆ. ನಮ್ಮ ದೈವವನ್ನು ಒಂದು ಮಾತ್ರೆಗೆ ಹೋಲಿಸಿದ್ದಾರೆ. ನಮ್ಮ ದೈವವೇ ಅವರಿಗೆ ಉತ್ತರ ಕೊಡಬೇಕು. ಎಲ್ಲಾ ಗುಳಿಗ ಶಕ್ತಿಗಳು ಒಟ್ಟು ಸೇರಿ ಅವರಿಗೆ ತಕ್ಕ ಶಾಸ್ತಿ ಮಾಡಬೇಕು. ದೈವ-ದೇವರ ಸನ್ನಿಧಿಯಲ್ಲಿ ಬಂದು ಗೃಹಸಚಿವರು ಕ್ಷಮೆ ಯಾಚಿಸಬೇಕು ಎಂದು ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಪ್ರಭಾಕರ ಶಾಂತಿಕೋಡಿ ಒತ್ತಾಯಿಸಿದ್ದಾರೆ.

ಒಂದು ವಾರದ ಗಡುವು ನೀಡುತ್ತೇವೆ. ಒಂದು ವಾರದಲ್ಲಿ ಬರದೆ ಇದ್ದರೆ ಮಂಗಳೂರು ಭೇಟಿ ಕಾರ್ಯಕ್ರಮದಲ್ಲಿ ಘೇರಾವ್ ಹಾಕುತ್ತೇವೆ. ಇನ್ಮುಂದೆ ದೈವಾರಾಧನೆಯನ್ನು ನಾಟಕ, ಯಕ್ಷಗಾನದಲ್ಲಿ ಬಳಕೆ ಮಾಡಬೇಡಿ. ದೈವರಾಧನೆಗೆ ಈ ರೀತಿ ನಡೆಯುವ ಅಪಚಾರ ತಪ್ಪಿಸಲು ದೈವರಾಧಕರ ಸಮಾವೇಶ ನಡೆಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!