Saturday, June 6, 2026
Homeಕರಾವಳಿಉಡುಪಿಉಡುಪಿ: ನೇಜಾರಿನಲ್ಲಿ ಮೂವರ ಕೊಲೆ ಪ್ರಕರಣ; ಆರೋಪಿ ಪ್ರವೀಣ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಸರಕಾರಿ...

ಉಡುಪಿ: ನೇಜಾರಿನಲ್ಲಿ ಮೂವರ ಕೊಲೆ ಪ್ರಕರಣ; ಆರೋಪಿ ಪ್ರವೀಣ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಸರಕಾರಿ ಅಭಿಯೋಜಕ

- Advertisement -
- Advertisement -

ಉಡುಪಿ: ನೇಜಾರಿನಲ್ಲಿ ನಡೆದ ಮೂವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್  ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದಾರೆ.
ಪ್ರಕಾಶ್‌ ಚಂದ್ರ ಶೆಟ್ಟಿ ನಿನ್ನೆಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ.

ಜಾಮೀನು ಅರ್ಜಿ ಕುರಿತು ವಾದ ಮಂಡಿಸಲು ಆರೋಪಿ ಪರ ವಕೀಲ ಕೆ.ಎಸ್.ಎನ್.ರಾಜೇಶ್ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಮನವಿ ಮಾಡಿದರು. ಅದರಂತೆ ನ್ಯಾಯಾಧೀಶ ದಿನೇಶ್ ಹೆಗ್ಡೆ ಡಿ.29ಕ್ಕೆ ವಾದ ಮಂಡಿಸಲು ದಿನಾಂಕ ನಿಗದಿಪಡಿಸಿದರು. ಇದೇ ದಿನ ಸರಕಾರಿ ಅಭಿಯೋಜಕರು ಕೂಡ ಪ್ರತಿವಾದ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!