Thursday, June 4, 2026
Homeಕರಾವಳಿಮಂಗಳೂರುಮಂಗಳೂರು:ಒಡ್ಡೂರು ಫಾರ್ಮ್ಸ್ ಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಭೇಟಿ

ಮಂಗಳೂರು:ಒಡ್ಡೂರು ಫಾರ್ಮ್ಸ್ ಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಭೇಟಿ

- Advertisement -
- Advertisement -

ಮಂಗಳೂರು: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಒಡ್ಡೂರು ಫಾರ್ಮ್ಸ್ ಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬುಧವಾರ ಭೇಟಿ ನೀಡಿದ್ದರು.

ಫಾರ್ಮ್ಸ್ ನಲ್ಲಿ ಆರ್. ಅಶೋಕ್ ಮತ್ತು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಶಾಸಕ ರಾಜೇಶ್ ನಾಯ್ಕ್ ಶಾಲು ಹೊದಿಸಿ ಸನ್ಮಾನಿಸಿದರು.

ನಂತರ ಫಾರ್ಮ್ಸ್ ನಲ್ಲಿ ಸುತ್ತು ಹಾಕಿದ ವಿಪಕ್ಷ ನಾಯಕ ಅಶೋಕ್, ಸಾವಯವ ಕೃಷಿ ವ್ಯವಸ್ಥೆ ಕುರಿತು ಶಾಸಕ‌ ರಾಜೇಶ್ ನಾಯ್ಕ್ ಅವರಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.

- Advertisement -

Latest News

error: Content is protected !!