- Advertisement -
![]()
- Advertisement -
ಬೆಂಗಳೂರು: ಧರ್ಮಸ್ಥಳದಲ್ಲಿ ಬಜರಂಗದಳ ಕಾರ್ಯಕರ್ತನಿಂದ ಹಲ್ಲೆಗೊಳಗಾಗಿ ಮೃತಪಟ್ಟ ದಿನೇಶ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವಂತೆ ವಿಧಾನ ಪರಿಷತ್ ನಲ್ಲಿ ಆಗ್ರಹ ವ್ಯಕ್ತವಾಗಿದೆ.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿಪಕ್ಷ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದಾಗ 25 ಲಕ್ಷ ಸರ್ಕಾರ ಕೊಟ್ಟಿದೆ, ಆದರೆ ದಿನೇಶ್ ನನ್ನು ಬಿಜೆಪಿ ಕಾರ್ಯಕರ್ತ ಕೊಂದರೂ ಪರಿಹಾರ ಕೊಟ್ಟಿಲ್ಲ, ಸರ್ಕಾರ ಇದರಲ್ಲಿ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಕಾಶ ರಾಥೋಡ್ ಪ್ರಸ್ತಾಪಕ್ಕೆ ಉತ್ತರಿಸಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಈಗಾಗಲೇ ಆರೋಪಿಯನ್ನು ಬಂಧನ ಮಾಡಲಾಗಿದೆ, ಯಾರೇ ತಪ್ಪು ಮಾಡಿದ್ರೂ ಯಾರನ್ನು ರಕ್ಷಣೆ ಮಾಡದೇ ಕ್ರಮ ತೆಗೆದುಕೊಳ್ಳುತ್ತೇವೆ, ಸಮಾಜ ಕಲ್ಯಾಣ ಇಲಾಖೆಯಿಂದ ಕೊಡಬಹುದಾದ ಪರಿಹಾರ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
- Advertisement -


