- Advertisement -
![]()
- Advertisement -
ಮಂಗಳೂರು: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ನಿರ್ಧಾರವನ್ನು ವಿರೋಧಿಸಿ, ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಸರಕಾರದ ಈ ಕ್ರಮವು ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಮಾರಕವೆಂದು ಧರಣಿ ನಡೆಸಿದರು.
ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಯಾದವ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಹಸ್ತಾಂತರದ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿ ಆರೋಗ್ಯ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
- Advertisement -


