ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರ್ನಾಟಕದ 7 ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರತದ ಹವಾಮಾನ ಇಲಾಖೆ ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 6ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಇಂದಿನಿಂದ 4 ದಿನಗಳ ಕಾಲ ಅಂದರೆ ಆಗಸ್ಟ್ 6ರವರೆಗೆ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ (ಆ. 3) ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.


