ಬೆಳ್ತಂಗಡಿ: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ ಮುಖ್ಯ ಪೇಟೆಗಳಾದ ಬೆಳ್ತಂಗಡಿ, ಧರ್ಮಸ್ಥಳ, ಉಜಿರೆ, ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆಯ ಪೇಟೆಯಲ್ಲಿರುವ ದಿನಸಿ, ಮೆಡಿಕಲ್ ಹಾಗೂ ತರಕಾರಿ ಅಂಗಡಿಗಳನ್ನು ಹೊರತುಪಡಿಸಿ ಇತರೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ತಕ್ಷಣವೇ ಮುಚ್ಚಬೇಕೆಂದು ಬೆಳ್ತಂಗಡಿಯ ಪೊಲೀಸ್ ವೃತ್ತ ನೀರೀಕ್ಷಕ ಸಂದೇಶ್ ಕುಮಾರ್ ಕರೆ ನೀಡಿದ್ದಾರೆ. ಸ್ವತಃ ಸಂದೇಶ್ ಕುಮಾರ್ ಅವರೇ ಬೀದಿಗಿಳಿದು ಅಂಗಡಿಗಳನ್ನು ಮುಚ್ಚಿಸುತ್ತಿದ್ದರೆ ಎಂದು ವರದಿಯಾಗಿದೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊರೊನಾ ಪೀಡಿತರಿಗೆ ಸೂಕ್ತ ಚಿಕಿತ್ಸೆ ನೀಡುವುದರ ಜೊತೆಗೆ ಶಂಕಿತರ ಮೇಲೆ ನಿಗಾ ಇಟ್ಟಿದೆ.
ದೇಶದಲ್ಲಿ 7 ಸಾವಿನ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 415 ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.
