Monday, June 8, 2026
Homeಕರಾವಳಿಮಂಗಳೂರು; ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ

ಮಂಗಳೂರು; ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ

- Advertisement -
- Advertisement -

ಮಂಗಳೂರು; ನಿನ್ನ ತಡರಾತ್ರಿ ಉಳ್ಳಾಲ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮೆದುಳು ನಿಷ್ಕ್ರಿಯಗೊಂಡಿದ್ದು ಇದೀಗ ಮನೆಮಂದಿ ಯುವಕನ ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬೈಕ್ ಚಲಾಯಿಸಿ ಬರುತ್ತಿದ್ದ ಭೂಷಣ್ ರೈ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಭೂಷಣ್ ರಸ್ತೆಯ ಇನ್ನೊಂದು ಕಡೆ ಎಸೆಯಲ್ಪಟ್ಟಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದಾರೆ. ಸಂಜೆ 4 ಗಂಟೆ ನಂತರ ನಡೆದ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು. ಮೃತ ಭೂಷಣ್ ಸಹೋದರಿಯ ವಿವಾಹ ಎರಡು ವಾರಗಳ ಹಿಂದೆಯಷ್ಟೇ ನೆರವೇರಿತ್ತು. ತಂದೆ ಮಾರಪ್ಪ ರೈ ವರ್ಷದ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಮೃತ ಭೂಷಣ್ ತಾಯಿ ಜತೆಗೆ ನೆಲೆಸಿದ್ದರು.

- Advertisement -

Latest News

error: Content is protected !!