Saturday, May 18, 2024
Homeಕರಾವಳಿಉಡುಪಿಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ

ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ

spot_img
- Advertisement -
- Advertisement -

ಮಂಗಳೂರು : ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಸ್ಥಿತಿ ಗಂಭೀರವಾಗಿದೆ. ಯೋಗ ಮಾಡುತ್ತಿದ್ದ ವೇಳೆ ಬಿದ್ದು ತಲೆಗೆ ಪೆಟ್ಟುಗೊಂಡು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದೆ.

ಅವರ ಕೈ ಮತ್ತು ಕಾಲುಗಳಲ್ಲಿ ಚಲನೆಯೊಂದಿಗೆ ಅವರ ಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆಯಾಗಿದೆ ಎಂದು ಫರ್ನಾಂಡಿಸ್ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಉಡುಪಿ ಮತ್ತು ಮಣಿಪಾಲದ ತಜ್ಞ ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇಡಲಾಗಿದೆ.

80 ವರ್ಷದ ಹಿರಿಯ ನಾಯಕ ತಮ್ಮ ನಿವಾಸದಲ್ಲಿ ಯೋಗ ಮಾಡುವಾಗ ತಲೆಗೆ ಗಾಯವಾಗಿದೆ. ಅವರು ತಮ್ಮ ವಾಡಿಕೆಯ ಡಯಾಲಿಸಿಸ್ ಗಾಗಿ ಯೆನೆಪೋಯಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ತಪಾಸಣೆಯ ಸಮಯದಲ್ಲಿ ಅವರು ಮಂಗಳವಾರ ಮೆದುಳಿನಲ್ಲಿ ಹೆಪ್ಪುಗಟ್ಟುವಿಕೆಯಿಂದ ಬಳಲುತ್ತಿದ್ದಾರೆ ಎಂದು ಕಂಡುಬಂದಿದೆ. ಅವರನ್ನು ಐಸಿಯುಗೆ ಸ್ಥಳಾಂತರಿಸಲಾಯಿತು.

ಆಸ್ಕರ್ ಫೆರ್ನಾಂಡೀಸ್ ಅವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ  ಮಾಜಿ ಕೇಂದ್ರ ಸಚಿವ ಜನಾರ್ಧನ್ ಪೂಜಾರಿ, ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದ್ದಾರೆ. ಅದಲ್ಲದೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕೂಡ ದೂರವಾಣಿ ಮೂಲಕ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!