Tuesday, June 18, 2024
Homeಕರಾವಳಿಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಮಂಗಳೂರು: ರಾಜ್ಯಸಭಾ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ ಮೂಲದವರಾದ ಆಸ್ಕರ್ ಫರ್ನಾಂಡಿಸ್ (79 ವರ್ಷ) ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.

ರಾಜ್ಯಸಭಾ ಸಂಸದರಾಗಿರುವ ಆಸ್ಕರ್ ಫರ್ನಾಂಡಿಸ್ ಅವರು ಲಾಕ್ ಡೌನ್ ಗಿಂತ ಮೊದಲು ಹೊಸದಿಲ್ಲಿಯಲ್ಲಿದ್ದರು. ಲಾಕ್ ಡೌನ್ ಘೋಷಣೆಯಾದಾಗ ಕೊನೆಯ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದರು.

ಇವರು ಉಡುಪಿ ಲೋಕಸಭಾ ಕ್ಷೇತ್ರದಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಮನಮೋಹನ್ ಸಿಂಗ್ ಅವರ ಮೊದಲ ಅವಧಿಯ ಸರಕಾರದಲ್ಲಿ ಕೇಂದ್ರ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಉತ್ತಮ ಹಿಡಿತ ಹೊಂದಿರುವ ಆಸ್ಕರ್ ಫರ್ನಾಂಡಿಸ್ ಅವರು ಸದ್ಯ ರಾಜ್ಯಸಭಾ ಸಂಸದರಾಗಿದ್ದಾರೆ.

- Advertisement -
spot_img

Latest News

error: Content is protected !!