Tuesday, April 30, 2024
Homeಕರಾವಳಿನಮ್ಮ ಸಿನಿಮಾಗಳು ನಮ್ಮ ಹೆಮ್ಮೆ: ಅವು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ: ನಟ ಕಿಶೋರ್

ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ: ಅವು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ: ನಟ ಕಿಶೋರ್

spot_img
- Advertisement -
- Advertisement -

ಕಾಂತಾರ ಸಿನಿಮಾ ಯಶಸ್ಸಿನ ಜೊತೆಯಲ್ಲೇ ವಿವಾದಗಳು ಸೃಷ್ಟಿಯಾಗಿದ್ದು ಅದರ ಬಗ್ಗೆ ನಟ ನಟಿಯರು ಪರವಿರೋಧ ಚರ್ಚೆಯಲ್ಲಿ ತೊಡಗಿದ್ದಾರೆ. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಕಿಶೋರ್‌ ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಎಂದಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದ್ದು, ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಲಿ ಕಳಕಳಿಯ ಮನವಿ.ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ?

ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿಹೋದೀತು ಎಂದಿದ್ದಾರೆ.

- Advertisement -
spot_img

Latest News

error: Content is protected !!