Friday, June 2, 2023
Homeತಾಜಾ ಸುದ್ದಿಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ: 59 ಜನರ ಬಂಧನ, 5 ಎಫ್‌ಐಆರ್

ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ: 59 ಜನರ ಬಂಧನ, 5 ಎಫ್‌ಐಆರ್

- Advertisement -
- Advertisement -

ಬೆಂಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 59 ಮಂದಿಯನ್ನು ಬಂಧಿಸಲಾಗಿದ್ದು, 5 ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 59 ಮಂದಿಯನ್ನು ಬಂಧಿಸಲಾಗಿದೆ. ಘಟನೆಯಾದ 3-4 ಗಂಟೆಯಲ್ಲಿ ಎಲ್ಲಾ ಪ್ರಮುಖರನ್ನ ಅರೆಸ್ಟ್ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದ್ದು, ಎಲ್ಲರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಸ್ತುತ ನಾನು ಘಟನೆ ನಡೆದ ಪಾದರಾಯನ ಪುರಕ್ಕೆ ತೆರಳುತ್ತಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಇತ್ತ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಗೃಹ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಪಾದರಾಯನಪುರ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ

ಕ್ವಾರಂಟೈನ್ ಮಾಡಲು ಹೋದ ಪೊಲೀಸರ ಮೇಲೆ ಕೆಲ ಪುಂಡರು ಹಲ್ಲೆ ನಡೆಸಿಸ ಘಟನೆಯ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಾಹಿತಿ ಕಲೆ ಹಾಕಿದ್ದು, ಘಟನೆಗೆ ಕಾರಣರಾದ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಆದೇಶಿಸಿದ್ದಾರೆ.

- Advertisement -

Latest News

error: Content is protected !!