Friday, May 17, 2024
Homeಕರಾವಳಿಬೆಳ್ತಂಗಡಿ: ಕೃಷಿ ಇಲಾಖೆಯಲ್ಲಿ ಭತ್ತದ ಬಿತ್ತನೆ ಬೀಜ ಲಭ್ಯ, ಅರ್ಜಿ ಸಲ್ಲಿಕೆಗೆ ಅವಕಾಶ

ಬೆಳ್ತಂಗಡಿ: ಕೃಷಿ ಇಲಾಖೆಯಲ್ಲಿ ಭತ್ತದ ಬಿತ್ತನೆ ಬೀಜ ಲಭ್ಯ, ಅರ್ಜಿ ಸಲ್ಲಿಕೆಗೆ ಅವಕಾಶ

spot_img
- Advertisement -
- Advertisement -

ಬೆಳ್ತಂಗಡಿ: ಪ್ರಸಕ್ತ 2020-21ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯವಿದ್ದು, ರೈತರು ಸೂಕ್ತ ದಾಖಲೆಗಳನ್ನು ನೀಡಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ.,ಪಹಣ , ಆಧಾರ್ ಜೆರಾಕ್ಸ್ ಪ್ರತಿಯನ್ನು ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ., ಪಹಣ , ಆಧಾರ್ ಜೆರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ.

ಬೆಳ್ತಂಗಡಿ ಹೋಬಳಿಯಲ್ಲಿ 40 ಕ್ವಿಂ., ಕೊಕ್ಕಡ ಹಾಗೂ ವೇಣೂರು ಹೋಬಳಿಯಲ್ಲಿ ತಲಾ 15 ಕ್ವಿಂಟಾಲ್ ದಾಸ್ತಾನುವಿದ್ದು, 25 ಕೆ.ಜಿ. ಯ ಚೀಲಕ್ಕೆ ರೂ.800 ದರವನ್ನು ಹೊಂದಿದೆ. ಸಾಮಾನ್ಯ ವರ್ಗದ ರೈತರಿಗೆ ಪ್ರತಿ ಚೀಲಕ್ಕೆ 200 ರೂ. ಸಹಾಯಧನ ಹಾಗೂ ಪ.ಜಾತಿ ಮತ್ತು ಪ.ಪಂಗಡಕ್ಕೆ 300 ರೂ. ಸಹಾಯಧನ ನೀಡಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು:
ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಬೆಳ್ತಂಗಡಿ- 8277931085,
ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಕೊಕ್ಕಡ ಮತ್ತು ವೇಣೂರು- 8277931083,
ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ- 8277931066

- Advertisement -
spot_img

Latest News

error: Content is protected !!