Friday, June 5, 2026
Homeಕರಾವಳಿವಿಶ್ವೇಶತೀರ್ಥ ಶ್ರೀಪಾದರಿಗೆ ರಾಷ್ಟ್ರಪತಿಗಳಿಂದ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ...! ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಗೌರವ...!

ವಿಶ್ವೇಶತೀರ್ಥ ಶ್ರೀಪಾದರಿಗೆ ರಾಷ್ಟ್ರಪತಿಗಳಿಂದ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ…! ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಗೌರವ…!

- Advertisement -
- Advertisement -

ನವದೆಹಲಿ: ಇಂದು ದೇಶದ ನಾಲ್ಕನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರದಾನ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಿತು. ಹರೇಕಳ ಹಾಜಬ್ಬ ಪದ್ಮಶ್ರೀ ಗೌರವ ಸ್ವೀಕರಿಸಿದರು.

ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ನಡೆದ ಸಮಾರಂಭದಲ್ಲಿ ಮರಣೋತ್ತರವಾಗಿ ಕೇಂದ್ರದ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್, ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೆಹಲಿಯ ರಾಷ್ಟ್ರಪತಿ ಭವನದ‌ಲ್ಲಿ ಬೆಳಗ್ಗೆ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.

7 ಪದ್ಮವಿಭೂಷಣ, 10 ಪದ್ಮಭೂಷಣ, 102 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ. ಪ್ರಶಸ್ತಿ ಪಡೆದವರಲ್ಲಿ 29 ಮಹಿಳೆಯರು, ಒಬ್ಬರು ತೃತೀಯ ಲಿಂಗಿ ಸೇರಿದ್ದಾರೆ.

- Advertisement -

Latest News

error: Content is protected !!