Saturday, April 20, 2024
Homeಕರಾವಳಿಬಂಟ್ವಾಳ ಮೃತ ಮಹಿಳೆಯ ಅತ್ತೆಗೆ ಚಿಕಿತ್ಸೆ ನೀಡಿದ ಫಸ್ಟ್ ನ್ಯೂರೋ ಆಸ್ಪತ್ರೆಯ ಆಸುಪಾಸು ಸೀಲ್ ಡೌನ್

ಬಂಟ್ವಾಳ ಮೃತ ಮಹಿಳೆಯ ಅತ್ತೆಗೆ ಚಿಕಿತ್ಸೆ ನೀಡಿದ ಫಸ್ಟ್ ನ್ಯೂರೋ ಆಸ್ಪತ್ರೆಯ ಆಸುಪಾಸು ಸೀಲ್ ಡೌನ್

spot_img
- Advertisement -
- Advertisement -

ಮಂಗಳೂರು: ಬಂಟ್ವಾಳ ಪೇಟೆಯ ಮೃತ ಮಹಿಳೆಯ ಅತ್ತೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ನಗರದ ಹೊರವಲಯದ ಪಡೀಲ್ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯ ಸೀಮಿತ ಪ್ರದೇಶವನ್ನು ಕಂಟೋನ್ಮೆಂಟ್ ವಲಯ ಎಂದು ಘೋಷಿಸುವ ಮೂಲಕ ಎಲ್ಲಾ ಚಟುವಟಿಕೆಗಳಿಗೆ ದ.ಕ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.

ಮೃತ ಮಹಿಳೆಯ ಅತ್ತೆ ಕಳೆದ ಒಂದು ತಿಂಗಳಿಂದ ಪಾರ್ಶ್ವವಾಯು ಪೀಡಿತರಾಗಿ ಪಡೀಲ್ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಮೃತ ಮಹಿಳೆಯ ಅತ್ತೆಗೂ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಆಸ್ಪತೆಯಲ್ಲಿ ಚಿಕಿತ್ಸೆಗೆ ದಾಖಲಾದವರೆಲ್ಲರೂ ಕೊರೊನಾ ಶಂಕೆಯ ವ್ಯಾಪ್ತಿಗೆ ಬಂದಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದವರು, ಈ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸುವ ಜೊತೆಗೆ ಕ್ವಾರಂಟೈನ್ ಮಾಡುವ ಅನಿವಾರ್ಯತೆ ಉಂಟಾಗಿದೆ.

ಈ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಸೋಂಕು ವ್ಯಾಪ್ತಿಸದಂತೆ ವೃದ್ಧೆ ಚಿಕಿತ್ಸೆಗೆ ದಾಖಲಾಗಿದ್ದ ಖಾಸಗಿ ಆಸ್ಪತ್ರೆಯನ್ನು “ಸುಪರ್ವೈಸ್ಡ್ ಐಸೋಲೆಟೆಡ್ ಸೆಂಟರ್” ಆಗಿ ಗುರುತಿಸಲಾಗಿದೆ. ಹೀಗಾಗಿ ಸೀಲ್ ಡೌನ್ ವೇಳೆ ಆಸ್ಪತ್ರೆಯಲ್ಲಿದ್ದ ರೋಗಿ, ಸಿಬ್ಬಂದಿ, ವೈದ್ಯರು, ನರ್ಸ್ ಸೇರಿದಂತೆ ಆಸ್ಪತ್ರೆಯಿಂದ ಹೊರಬರುವಂತಿಲ್ಲ. ಹಾಗೂ ಯಾರು ಕೂಡಾ ಒಳಹೋಗುವಂತಿಲ್ಲ. ಆಸ್ಪತ್ರೆಯಲ್ಲಿ ಸೀಲ್ ಡೌನ್ ವೇಳೆ ಇದ್ದವರಿಗೆ ಆಹಾರ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಲಿದೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಪೂರ್ವ ಭಾಗದಿಂದ ಕನ್ನಗುಡ್ಡೆ, ಪಶ್ಚಿಮದಿಂದ ರಮಾನಾಥ್ ಕೃಪಾ ರೈಸ್ ಮಿಲ್, ಉತ್ತರಕ್ಕೆ ರಾಷ್ಟ್ರೀಯ ಹೆದ್ದಾರಿ 73 ಮತ್ತು ದಕ್ಷಿಣಕ್ಕೆ ಸರ್ಕಾರಿ ಜಾಗದ ಸುತ್ತ ಕಂಟೋನ್ಮೆಂಟ್ ಪ್ರದೇಶ ಘೋಷಣೆ ಮಾಡಲಾಗಿದೆ. ಆಸ್ಪತ್ರೆ ಜೊತೆಗೆ ಎರಡು ಮನೆ, ಐದು ಅಂಗಡಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಅಲ್ಲಿಂದ 5 ಕಿಲೋಮೀಟರ್ ಸುತ್ತಾಮುತ್ತಾ ಬಫರ್ ಝೋನ್ ಆಗಿ ಘೋಷಿಸಲಾಗಿದೆ. ಕಲ್ಲಾಪು, ಕುಡುಪು, ಫರಂಗಿಪೇಟೆ, ಫಳ್ನೀರ್ ಪ್ರದೇಶ ಒಳಗೊಳ್ಳಲಿದ್ದು 42 ಸಾವಿರ ಮನೆ, 1800 ಅಂಗಡಿ ಮತ್ತು ಕಚೇರಿ, 1.8 ಲಕ್ಷ ಜನರು ಈ ವ್ಯಾಪ್ತಿಗೆ ಬರಲಿದ್ದಾರೆ.

- Advertisement -
spot_img

Latest News

error: Content is protected !!