Friday, September 11, 2026
Homeಕರಾವಳಿಮಂಗಳೂರುದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಎಐಸಿಸಿ ನೇಮಕ ಮಾಡಿದೆ. ಈ ಕುರಿತು ಕಾಂಗ್ರೆಸ್ ಸಂಸದ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಪಕ್ಷದ ಬಲವರ್ಧನೆಗಾಗಿ ಹಮ್ಮಿಕೊಳ್ಳಲಾಗಿರುವ ‘ಸಂಘಟನ್ ಸೃಜನ ಅಭಿಯಾನ’ದ ಭಾಗವಾಗಿ ಈ ಪ್ರಮುಖ ಹುದ್ದೆಯ ನೇಮಕ ನಡೆದಿದೆ. ಅಭಿಯಾನದಡಿ ಪ್ರತಿ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಸ್ಥಳೀಯ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಸಮಗ್ರ ವರದಿ ಸಿದ್ಧಪಡಿಸಿದ್ದರು.

ಸಲ್ಲಿಕೆಯಾದ ವರದಿಗಳ ಆಧಾರದ ಮೇಲೆ, ನಾಯಕರೊಂದಿಗೆ ವೈಯಕ್ತಿಕವಾಗಿ ಚರ್ಚಿಸಿ ಮತ್ತು ಹಿರಿಯ ನಾಯಕರ ಸಲಹೆ-ಸೂಚನೆಗಳನ್ನು ಪಡೆದುಕೊಂಡ ನಂತರವೇ ಈ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಪದ್ಮರಾಜ್ ಅವರ ನೇಮಕಾತಿಯಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!