Wednesday, June 3, 2026
Homeತಾಜಾ ಸುದ್ದಿಮಂಗಳೂರು: ಪದ್ಮಶ್ರೀ ಸುಕ್ರಜ್ಜಿ ಬೊಮ್ಮಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಗಳೂರು: ಪದ್ಮಶ್ರೀ ಸುಕ್ರಜ್ಜಿ ಬೊಮ್ಮಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

- Advertisement -
- Advertisement -

ಮಂಗಳೂರು: ಉಸಿರಾಟದ ತೊಂದರೆಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ, ಮರಳಿ ತಮ್ಮ ಊರಾದ ಅಂಕೋಲದತ್ತ ಪಯಣಿಸಿದ್ದಾರೆ.

ಪದ್ಮಶ್ರೀ ಹಾಲಕ್ಕಿ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ಉಸಿರಾಟದ ತೊಂದರೆಯಿಂದ 6 ದಿನಗಳ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ತಂತು ಶಸ್ತ್ರ ಚಿಕಿತ್ಸೆ ಮತ್ತು ಸಣ್ಣ ಮಟ್ಟಿನ ಹೃದಯದ ಚಿಕಿತ್ಸೆ ಕೂಡ ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ವಾರ್ಡ್​ಗೆ ಶಿಫ್ಟ್​​ ಮಾಡಲಾಗಿತ್ತು. ಇದೀಗ ಗುಣಮುಖರಾದ ಸುಕ್ರಿ ಬೊಮ್ಮಗೌಡ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

- Advertisement -

Latest News

error: Content is protected !!