Friday, August 7, 2026
Homeಕರಾವಳಿಉಡುಪಿಪಡುಬಿದ್ರಿ: ದುಷ್ಕರ್ಮಿಗಳ ಗುಂಡೇಟಿಗೆ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಬಲಿ

ಪಡುಬಿದ್ರಿ: ದುಷ್ಕರ್ಮಿಗಳ ಗುಂಡೇಟಿಗೆ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಬಲಿ

- Advertisement -
- Advertisement -

ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಡೇವಿಡ್‌ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಂತಕರ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

- Advertisement -

Latest News

error: Content is protected !!