Monday, June 30, 2025
Homeತಾಜಾ ಸುದ್ದಿಶಿವಮೊಗ್ಗ ಡೈನಾಮೈಟ್‌ ಸ್ಫೋಟ: ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ ಡೈನಾಮೈಟ್‌ ಸ್ಫೋಟ: ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ

spot_img
- Advertisement -
- Advertisement -

ಶಿವಮೊಗ್ಗ: ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಗುರುವಾರ ರಾತ್ರಿ ಕ್ರಷರ್‌ನಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ಶುಕ್ರವಾರ ಪ್ರಧಾನಮಂತ್ರಿಗಳ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ. “ಶಿವಮೊಗ್ಗದಲ್ಲಿ ನಡೆದ ಜೀವ ಹಾನಿ ಬಗ್ಗೆ ನೋವುಂಟಾಗಿದೆ. ಅವರ ಕುಟುಂಬಕ್ಕೆ ಸಂತಾಪಗಳು” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

“ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ. ರಾಜ್ಯ ಸರ್ಕಾರ ಗಾಯಗೊಂಡವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದು, ಪ್ರಧಾನ ಮಂತ್ರಿಗಳ ಕಾರ್ಯಾಲಯ ಅದನ್ನು ಟ್ವೀಟ್ ಮಾಡಿದೆ.

ಸ್ಫೋಟ ಪ್ರಕರಣವನ್ನು ಗಂಭೀರವನ್ನು ಪರಿಗಣಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಉನ್ನತಮಟ್ಟದ ತನಿಖೆಗೆ ಆದೆಶಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ. ಈ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. ಎಂದು ತಿಳಿಸಿದ್ದಾರೆ.

ಶಿವಮೊಗ್ಗದ ಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದರು.

- Advertisement -
spot_img

Latest News

error: Content is protected !!