Friday, June 5, 2026
Homeಕರಾವಳಿಮಂಜೇಶ್ವರದಲ್ಲಿ ಅಣ್ಣನಿಂದಲೇ ತಮ್ಮನ ಕೊಲೆ ಪ್ರಕರಣ; ಪುತ್ತೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಜೇಶ್ವರದಲ್ಲಿ ಅಣ್ಣನಿಂದಲೇ ತಮ್ಮನ ಕೊಲೆ ಪ್ರಕರಣ; ಪುತ್ತೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಪುತ್ತೂರು: ಮಂಜೇಶ್ವರದ ಪೈವಳಿಕೆಯಲ್ಲಿ ತಮ್ಮನನ್ನು ಕೊಲೆಗೈದು ತಪ್ಪಿಸಿಕೊಂಡಿದ್ದ ಅಣ್ಣನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಜಯರಾಮ ನೋಂಡ ಬಂಧಿತ ಆರೋಪಿ.

ಈತ ಪುತ್ತೂರಿನಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೇರಳ ಪೊಲೀಸರು ಪುತ್ತೂರು ನಗರ ಪೊಲೀಸರ ಸಹಕಾರದಿಂದ ಕೊಂಬೆಟ್ಟು ಬಳಿ ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರ ಕಾರ್ಯಾಚರಣೆ ವೇಳೆ ಆರೋಪಿ ದೇವಸ್ಥಾನದ ಬಳಿಯ ಚರಂಡಿಗೆ ಹಾರಿ ತಪ್ಪಿಸಿಕೊಳ್ಳುವ ಪ್ರಯತ್ನವನ್ನು ಮಾಡಿದ್ದ ಎನ್ನಲಾಗಿದೆ.

ಇಂದು ಬೆಳಿಗ್ಗೆ ಸಹೋದರ ಪ್ರಭಾಕರ್ ಗೆ ವೈಷಮ್ಯದಿಂದ ಕೊಲೆಮಾಡಿ ಜಯರಾಮ ಕಾಸರಗೋಡಿನ ಪೈವಳಿಕೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ.ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಈತ ಈ ಮೊದಲು ಕೂಡ ಕ್ರಿಮಿನಲ್ ಕೇಸ್ ಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

- Advertisement -

Latest News

error: Content is protected !!