- Advertisement -
- Advertisement -
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಿಂತು “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ ಕೂಗಿರುವ ಪ್ರಕರಣ ವರದಿಯಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಖಾನ್ ಮಾರುಕಟ್ಟೆಯಲ್ಲಿ ದೇಶದ್ರೋಹಿ ಘೋಷಣೆ ಕೂಗಿರುವ ಬಗ್ಗೆ ದೂರು ದಾಖಲಿಸಲಾಗಿತ್ತು.
ತನಿಖೆ ನಡೆಸಿ ಪೊಲೀಸರು ಇಂದು ಬೆಳಗಿನ ಜಾವ ನಗರದ ಖಾನ್ ಮಾರುಕಟ್ಟೆ ಸಮೀಪದಲ್ಲಿ ನಿಂತಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ.ನವದೆಹಲಿ ಖಾನ್ ಮಾರುಕಟ್ಟೆ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಯಾರೋ ಅಪರಿಚಿತರು ಪಾಕಿಸ್ತಾನರ ಪರವಾಗಿ ಘೋಷಣೆ ಕೂಗುತ್ತಾ ಓಡಾಡುತ್ತಿದ್ದಾರೆ ಎಂದು ಮಧ್ಯರಾತ್ರಿ 1 ಗಂಟೆ ವೇಳೆಗೆ ಪೊಲೀಸ್ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆಗೆ ದೂರು ಬಂದಿತ್ತು. ಆದರೆ ಮಿಂಚಿನ ಕಾರ್ಯಾಚರಣೆ ನಡೆಸಿದ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದಾರೆ.
- Advertisement -